ಬೆಳಗಾವಿ: ಬೆಳಗಾವಿಯಲ್ಲಿ ಮೂವರು ಮಕ್ಕಳ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ತೋರಿದ ಇಬ್ಬರು ವೈದ್ಯಕೀಯ ಸಿಬ್ಬಂದಿಯನ್ನು ಅಮಾನತು ಮಾಡಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನರ್ಸ್ ಹಾಗೂ ಫಾರ್ಮಸಿಸ್ಟ್ ಬೇಜವಾಬ್ದಾರಿಯಿಂದ ಮಕ್ಕಳ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ. ಸೆಪ್ಟಿಕ್ ಶಾರ್ಟ್ ಸಿಂಡ್ರೋಮ್‌ನಿಂದ ಮೃತಪಟ್ಟಿರಬಹುದು. ಈ ಬಗ್ಗೆ ತನಿಖೆ ಮಾಡಿ ವರದಿ ನೀಡುವಂತೆ ಸೂಚಿಸಲಾಗಿದೆ. ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡಿದ್ದಾರಾ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ. ಎರಡು ದಿನಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಸೂಚಿಸಿದ್ದೇನೆ. ತನಿಖೆಗಾಗಿ ನೋಡಲ್ ಅಧಿಕಾರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸುಧಾಕರ್ ಡಾ. ಸುಧಾಕರ್ ಹೇಳಿದ್ದಾರೆ
PublicNext
17/01/2022 02:50 pm