ಚನ್ನೈ : ಡೆಡ್ಲಿ ಕೊರೊನಾ ಸೋಂಕಿನಿಂದ ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಮೃತಪಟ್ಟಿದ್ದಾರೆ.
ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ದೊರೆಕಣ್ಣು ಶನಿವಾರ ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಅರವಿಂದ್ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 13 ರಂದು ವಿಲ್ಲೂಪುರಂ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ದೊರೆಕಣ್ಣು ಅವರನ್ನು ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರಿಗೆ ಜೀವರಕ್ಷಕ ಸಾಧನಗಳ ನೆರವಿನಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು.
2006, 2011 ಮತ್ತು 2016ರಲ್ಲಿ ತಂಜಾವೂರು ಜಿಲ್ಲೆಯ ಪಾಪನಾಶಂನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜಯಲಲಿತಾ ಸಂಪುಟದಲ್ಲಿಯೂ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
PublicNext
01/11/2020 07:56 am