ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಠ ಮಾಡುತ್ತಿರುವಾಗಲೇ ಹೃದಯಾಘಾತ : ಶಿಕ್ಷಕ ಸಾವು, ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು

ಮಂಡ್ಯ: ಗುರು ದೇವರ ಸಮಾನ ಹೀಗೆ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರೊಬ್ಬರು ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಬಾರದಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಹೌದು ಮಂಡ್ಯದಲ್ಲಿ ಜಿಲ್ಲೆಯ ಎಲೆಚಾಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ರಾಜೇಶ್(47) ಮೃತರು.

ಗುರುವಾರ ತರಗತಿಯಲ್ಲಿ ಮಕ್ಕಳಿಗೆ ಎಂದಿನಂತೆ ಪಾಠ ಮಾಡುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಕೆರೆದೊಯ್ಯದರು ಅವರು ಉಳಿಯಲಿಲ್ಲ. ಅತ್ತ ಶಾಲೆಯಲ್ಲಿ ಶಿಕ್ಷಕರ ಸಾವಿನ ಸುದ್ದಿ ಕೇಳಿದ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತದಿದ್ದಾರೆ.

Edited By : Nirmala Aralikatti
PublicNext

PublicNext

25/12/2021 03:59 pm

Cinque Terre

76.63 K

Cinque Terre

10