ಹಾಸನ: ಸಾವು-ಬದುಕಿನ ಮಧ್ಯೆ ಹೋರಾಟುತ್ತಿರುವ ನಾಲ್ಕು ದಿನದ ಮಗುವನ್ನು ಝೀರೋ ಟ್ರಾಫಿಕ್ ಮೂಲಕ ಹಾಸನದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದೆ.
ಶ್ವೇತಾ ಮತ್ತು ತ್ರಿವೇದಿ ದಂಪತಿಯ ನಾಲ್ಕು ದಿನದ ಮಗು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದೆ. ಸದ್ಯ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮಗುವನ್ನು ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ಝೀರೋ ಟ್ರಾಫಿಕ್ ಸೌಲಭ್ಯದೊಂದಿಗೆ ಚನ್ನರಾಯಪಟ್ಟಣ, ಕುಣಿಗಲ್ ಮಾರ್ಗವಾಗಿ ಸಾಗಿಸಲಾಗುತ್ತಿದೆ. ಹಾಸನ ಮೂಲದ ಚಾಲಕ ಮಧುಸೂದನ್ ಅವರು ಆಂಬ್ಯುಲೆನ್ಸ್ ಚಾಲನೆ ಮಾಡುತ್ತಿದ್ದಾರೆ.
PublicNext
21/04/2022 01:48 pm