ಮಂಡ್ಯ : ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂ. ಡಾಕ್ಟರ್ ಸಿ.ಎಸ್ ಶಂಕರೇಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮೇ. 23ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದ ಅವರು ಇದೀಗ ಚೇತರಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
PublicNext
31/05/2022 07:39 am