ಬೆಂಗಳೂರು: ರಾಜ್ಯದಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು 8,655 ಮಂದಿಗೆ ಕೊರೊನಾ ಸೋಂಕು ದೃಢವಾಗಿದ್ದು, 86 ಜನ ಬಲಿಯಾಗಿದ್ದಾರೆ. ಇನ್ನು 19 ಸೋಂಕಿತರು ಅನ್ಯಕಾರಣಕ್ಕೆ ಮೃತರಾಗಿದ್ದಾರೆ.
ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5,57,212ಕ್ಕೆ ಏರಿಕೆಯಾದರೆ, ಇಲ್ಲಿವರೆಗೂ ಹೆಮ್ಮಾರಿಗೆ 8,266 ಮಂದಿ ಕೊರೊನಾಗೆ ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಇಂದು 5,644 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, ಈವರೆಗೆ 4,50,302 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 98,474 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಸುಮಾರು 823 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. 4,75,438 ಜನರು ಕ್ವಾರೆಂಟೈನ್ನಲ್ಲಿ ಇದ್ದಾರೆ.
PublicNext
25/09/2020 09:42 pm