ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿನ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ.
ಹೌದು ಇನ್ನು ಮುಂದೆ ಮಾಸ್ಕ್ ಧರಿಸದಿದ್ದರೆ 1000 ರೂಪಾಯಿ ದಂಡ ವಿಧಿಸಲಾಗುವುದು, ಮೂರನೇ ಸಲ ತಪ್ಪು ಪುನರಾವರ್ತನೆಯಾದಲ್ಲಿ ಜೈಲಿಗೆ ಹಾಕಲಾಗುವುದು, ಅದೇ ರೀತಿ 100 ಕ್ಕಿಂತ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲಿದ್ದು, ಕೋವಿಡ್ ನಿಯಮ ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ವಿಪರೀತ ಹೆಚ್ಚಳವಾಗುತ್ತಿದೆ. ಜನರ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆನ್ನಲಾಗಿದೆ. ಅನ್ಲಾಕ್ ನಂತರದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗಿದ್ದು, ಜನ ಕೊರೊನಾ ಹೊರಟು ಹೋಗಿದೆ ಎಂಬ ಭಾವನೆಯಿಂದ ಸಾಮಾಜಿಕ ಅಂತರ ಮರೆಯುತ್ತಿದ್ದಾರೆ.
ಈ ಕುರಿತಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಿಸಲಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ಜುಲೈ, ಆಗಸ್ಟ್ ಮತ್ತು ಸೆಪ್ಟಂಬರ್‌ನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಸೋಂಕಿನ ಕುರಿತು ರಾಜ್ಯ ಸರಕಾರವು ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ಕಠಿನ ಕಾನೂನು ಜಾರಿಗೆ ತರುವುದೇ ಸರಕಾರದ ಮುಂದಿರುವ ಏಕೈಕ ಮಾರ್ಗ, ಮಾರ್ಗಸೂಚಿ ಅನುಸರಿಸದವರಿಗೆ ಕಠಿನ ಶಿಕ್ಷೆ ಮತ್ತು ದಂಡ ಪ್ರಯೋಗ ಅನಿವಾರ್ಯ ಎಂದರು.
ಮಾಸ್ಕ್ ಬಳಕೆ ಕಡಿಮೆಯಾಗಿದ್ದು ದೈಹಿಕ ಅಂತರ ಪಾಲಿಸುತ್ತಿಲ್ಲ. ಹೆಚ್ಚು ಕಾರ್ಯಕ್ರಮಗಳು ನಡೆಯುತ್ತಲೇ ಇವೆ. ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
PublicNext
30/09/2020 08:20 am