ಬೀಜಿಂಗ್: ಚೀನಾದ ಐಸ್ ಕ್ರೀಂನಲ್ಲಿ ಕೊರೊನಾವೈರಸ್ ಪತ್ತೆಯಾಗಿದ್ದು, ಒಂದು ಸಾವಿರ ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ದೇಶದ ಈಶಾನ್ಯದಲ್ಲಿರುವ ಟಿಯಾಂಜಿನ್ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ತಯಾರಿಸಿದ ಐಸ್ ಕ್ರೀಂನ ಮೂರು ಮಾದರಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಖಚಿತವಾಗಿದೆ.
'ಟಿಯಾಂಜಿನ್ ನಲ್ಲಿರುವ ಡಕಿಯೊಡಾವೊ ಫುಡ್ ಕೋ.ಲಿಮಿಟೆಡ್ನ ಐಸ್ಕ್ರೀಂನಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಸಂಸ್ಥೆಯ ಸಿಬ್ಬಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಆದರೆ, ಅವರಿಗೆ ಸೋಂಕು ತಗುಲಿರುವ ಬಗ್ಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ' ಎಂದು ಅಲ್ಲಿನ ಸ್ಥಳೀಯ ಆಡಳಿತ ತಿಳಿಸಿದೆ.
ಐಸ್ ಕ್ರೀಂನ 29,000 ಪೆಟ್ಟಿಗೆಗಳು ಇನ್ನೂ ಮಾರಾಟವಾಗಿಲ್ಲ. ಆದರೆ, ಇದುವರೆಗೆ ಮಾರಾಟವಾಗಿರುವ 390 ಪೆಟ್ಟಿಗೆಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಈ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸರ್ಕಾರ ಹೇಳಿದೆ.
PublicNext
17/01/2021 02:40 pm