ತುಮಕೂರು: ಶಿರಾ ತಾಲೂಕಿನಲ್ಲಿ ಕಳ್ಳಂಬೆಳ್ಳ ಬಾಲೆನಹಳ್ಳಿ ಬಳಿ ಭೀಕರ ಅಪಘಾತದಲ್ಲಿ ಗಾಯಗೊಂಡ 14 ಜನರಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿಗೆ ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಭೇಟಿ ನೀಡಿ ಸೂಕ್ತ ಚಿಕಿತ್ಸೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಇಬ್ಬರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕುಟುಂಬದೊಂದಿಗೆ ಚರ್ಚಿಸಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹ ಸಂಬಂಧಿಕರಿಗೆ ಹಸ್ತಾಂತರಿಸುವುದಾಗಿ ಜಿಲ್ಲಾಧಿಕಾರಿ ಪಬ್ಲಿಕ್ ನೆಕ್ಸ್ಟ್ ಗೆ ಮಾಹಿತಿ ತಿಳಿಸಿದ್ದಾರೆ.
ವರದಿ: ರಾಘವೇಂದ್ರ ದಾಸರಹಳ್ಳಿ ಪಬ್ಲಿಕ್ ನೆಕ್ಸ್ಟ್
PublicNext
25/08/2022 09:12 am