ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೋನಾ ಪರೀಕ್ಷೆ ನಿರಾಕರಿಸಿದರೆ ಕೇಸ್‌: ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಲಕ್ಷಣ ಹೊಂದಿರುವವರು, ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರು ಸೋಂಕು ಪರೀಕ್ಷೆ ಮಾಡಿಸಿಕೊಳ್ಳಲು ನಿರಾಕರಿಸಿದರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ ಪ್ರಾಥಮಿಕ ಮತ್ತು ಪರೋಕ್ಷ ಸಂಪರ್ಕಿತರು ಹಾಗೂ ಕೆಮ್ಮು, ಶೀತ, ಜ್ವರ ಹಾಗೂ ಉಸಿರಾಟದ ಸಮಸ್ಯೆ ಸೇರಿದಂತೆ ಯಾವುದೇ ಸೋಂಕಿನ ಲಕ್ಷಣ ಕಂಡುಬಂದಲ್ಲಿ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಬೇಕು, ಇಲ್ಲವಾದಲ್ಲಿ ಅಂತವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಕುರಿತು ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

ಬಿಬಿಎಂಪಿಯಿಂದಲೇ ಐದು ಲಕ್ಷ RTPCR ಹಾಗೂ Rapid ಆ್ಯಂಟಿಜೆನ್‌ ಟೆಸ್ಟ್ ಕಿಟ್‌ಗಳಗಳ ಖರೀದಿಗೆ ಟೆಂಡರ್‌ ಕರೆಯಲಾಗಿದ್ದು, ಇದರ ವೆಚ್ಚವನ್ನು ಆರೋಗ್ಯ ಇಲಾಖೆ ವಹಿಸಲಿದೆ. ಕೊರೋನಾ ಸೋಂಕು ಪರೀಕ್ಷೆಗೆ ಸಹಕಾರ ನೀಡುವಂತೆ ಕೋರಲಾಗಿದೆ. ಇತ್ತೀಚಿನ ದಿನಗಳಲ್ಲಿ 26ರಿಂದ 28 ಸಾವಿರ ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Edited By :
PublicNext

PublicNext

30/09/2020 11:25 am

Cinque Terre

91.23 K

Cinque Terre

0

ಸಂಬಂಧಿತ ಸುದ್ದಿ