ಚಿತ್ರದುರ್ಗ : ಮಾಸ್ಕ್ ಹಾಕದೆ ಓಡಾಡುತ್ತಿದ್ದ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ತಹಶೀಲ್ದಾರ್ ದಂಡ ವಿಧಿಸಿರುವ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ಜಿಲ್ಲೆಯ ಚಳ್ಳಕೆರೆ ತಹಶೀಲ್ದಾರ್ ರಘುಮೂರ್ತಿ ಅವರು ಖುದ್ದಾಗಿ ಫೀಲ್ಡ್ ಗೆ ಇಳಿದು ಮಾಸ್ಕ್ ಹಾಕದೆ ತಿರುಗಾಡುತ್ತಿದ್ದವರಿಗೆ 100 ರೂಪಾಯಿ ದಂಡ ವಿಧಿಸಿ, ತಾವೇ ಮಾಸ್ಕ್ ಹಾಕುವ ಮೂಲಕ ಜಾಗೃತಿ ಮೂಡಿಸಿದ್ದಾರೆ.
ಒಂದು ವಾರದ ಹಿಂದೆಯಷ್ಟೇ ಚಳ್ಳಕೆರೆಗೆ ತಹಶೀಲ್ದಾರ್ ಆಗಿ ನೇಮಕಗೊಂಡಿದ್ದರು. ಕೆಎಸ್ಸಾರ್ಟಿಸಿ ಬಸ್, ಬೈಕ್, ಟೆಂಪೋ, ಪ್ರಯಾಣಿಕರಿಗೆ ಹಾಗೂ ಮಾರ್ಕೆಟ್ ಸೇರಿದಂತೆ ಇತರೆ ಕಡೆಗಳಲ್ಲಿ ಮಾಸ್ಕ್ ಹಾಕದೆ ಓಡಾಡುತ್ತಿದ್ದವರಿಗೆ ತಹಶೀಲ್ದಾರ್ ದಂಡ ವಿಧಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಕರೋನಾ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮೈಮರೆತು ಅಡ್ಡಾಡಬಾರದು, ಪ್ರತಿಯೊಬ್ಬರು ಮಾಸ್ಕ್ ಧರಿಸಿ ಎಂದು ಜಾಗೃತಿ ಮೂಡಿಸಿದ್ದಾರೆ. ತಹಶೀಲ್ದಾರ್ ಅವರ ಈ ಜಾಗೃತಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
PublicNext
31/07/2021 11:02 pm