ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಿಸಲು ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಹೀಗಾಗಿ ಅನಗತ್ಯವಾಗಿ ಹೊರಗೆ ಓಡಾಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ನೈಟ್ ಕರ್ಫ್ಯೂ ವೇಳೆ ಅನಗತ್ಯವಾಗಿ ಹೊರಗೆ ಓಡಾಡಬಾರದು. ಸೂಕ್ತ ಕಾರಣ ಇಲ್ಲದೆ ಅನಗತ್ಯವಾಗಿ ಯಾರು ಹೊರಗಡೆ ಬರುತ್ತಾರೋ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡುತ್ತೇವೆ ಎಂದು ಕಮಲ್ ಪಂತ್ ತಿಳಿಸಿದ್ದಾರೆ.
ಇನ್ನೂ ನೈಟ್ ಕರ್ಪ್ಯೂ ಯಾರು ಉಲ್ಲಂಘನೆ ಮಾಡುತ್ತಾರೆ ಅವರ ವಾಹನ ಜಪ್ತಿ ಮಾಡುತ್ತೇವೆ. ಈಗಾಗಲೇ ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ ನಡೆಯುತ್ತಿದೆ. ಅದನ್ನ ಮತ್ತಷ್ಟು ಬಿಗಿಗೊಳಿಸುತ್ತೇವೆ. ಮದ್ಯದಂಗಡಿಗಳನ್ನು ರಾತ್ರಿ 9ಗಂಟೆಯೊಳಗಾಗಿ ಮುಚ್ಚದಿದ್ದರೆ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂತ್ ಮುನ್ಸೂಚನೆ ನೀಡದ್ದಾರೆ.
PublicNext
08/08/2021 07:16 am