ಬೆಂಗಳೂರು: ಆಗಸ್ಟ್ 30ರವರೆಗೆ ನೈಟ್ ಕರ್ಫ್ಯೂ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಇರಲಿದೆ. ಆಗಸ್ಟ್ 16ರಿಂದ ಆಗಸ್ಟ್ 30 ರವರೆಗೆ ನೈಟ್ ಕರ್ಫ್ಯೂವನ್ನು ವಿಸ್ತರಣೆ ಮಾಡಲಾಗಿದೆ. ಏರ್ಪೋರ್ಟ್, ಅಗತ್ಯ ಮೂಲಭೂತ ಸೌಕರ್ಯ, ಸೇವೆ ಸರಬರಾಜಿಗೆ ಅವಕಾಶ ನೀಡಲಾಗಿದೆ. ವೀಕೆಂಡ್ ಕರ್ಫ್ಯೂ ಕೂಡ ಜಾರಿಯಲ್ಲಿ ಇರುತ್ತದೆ ಎಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಮಲ್ಪಂತ್ ತಿಳಿಸಿದ್ದಾರೆ.
PublicNext
17/08/2021 10:33 pm