ನವದೆಹಲಿ: ಕೋವಿಡ್-19 ವಿರುದ್ಧದ ಲಸಿಕೆ ಪಡೆಯುವಂತೆ ಯಾವುದೇ ವ್ಯಕ್ತಿ, ಮಹಿಳೆಗೆ ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸುವುದರ ವಿರುದ್ಧದ ಅರ್ಜಿ ಕುರಿತು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ಸುಪ್ರೀಂ ಕೋರ್ಟ್, 'ಲಸಿಕೆಗಳ ಪ್ರತಿಕೂಲ ಪರಿಣಾಮಗಳ ಕುರಿತು ಜನರು ಮತ್ತು ವೈದ್ಯರಿಂದ ವರದಿಗಳನ್ನು ಸಂಗ್ರಹಿಸಿ ಸಾರ್ವಜನಿಕವಾಗಿ ಪ್ರಕಟಿಸಬೇಕು' ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ದೇಶದಲ್ಲಿ ಕೋವಿಡ್-19 ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ಮತ್ತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರಗಳು ಮುಂದಾಗಿವೆ. ಈ ಮಧ್ಯೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
PublicNext
02/05/2022 12:10 pm