ತಿರುವನಂತಪುರಂ : ಕೇರಳ ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ವೈರಸ್ ಅಬ್ಬರ ತಡೆಯಲು, ಮತ್ತೆ ಲಾಕ್ ಡೌನ್ ಘೋಷಣೆ ಮಾಬೇಕಾಗಿ ಬರಬಹುದು ಎಂದು ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ಎರಡನೇ ಹಂತದ ಅಲೆ ಹಬ್ಬುತ್ತಿದ್ದು, ದಿನೇ ದಿನೇ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಜನರು ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು, ಇಲ್ಲದಿದ್ದರೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಘೋಷಣೆ ಜೊತೆಗೆ ಮತ್ತಷ್ಟು ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕೇರಳ ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದ್ದು ಇದುವರೆಗೆ 1,67,939 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 656 ಜನರು ಬಲಿಯಾಗಿದ್ದಾರೆ. ಇನ್ನೂ 1,14,530 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
20-40 ವಯಸ್ಸಿನವರಲ್ಲಿ ಹೆಚ್ಚಾಗಿ ಕೊರೊನಾ ಅತಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೋವಿಡ್‍ನಿಂದ ಸಾವನ್ನಪ್ಪಿದವರಲ್ಲಿ ಶೇ. 72 ರಷ್ಟು 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ಹೆಚ್ಚಿನ ಪ್ರಕರಣಗಳು ಕಂಡುಬಂದರೆ ಕೇರಳವು ಮತ್ತಷ್ಟು ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಹೀಗಾಗಿ ರಾಜ್ಯದಲ್ಲಿ ಮತ್ತೆ ಸಂಪೂರ್ಣ ಲಾಕ್‍ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಕೆ.ಕೆ.ಶೈಲಜಾ ತಿಳಿಸಿದ್ದಾರೆ.
PublicNext
28/09/2020 11:18 am