ವಿಜಯನಗರ: ಮಕರ ಸಂಕ್ರಾಂತಿ ಹಾಗೂ ಕೊರೊನಾ ತೀವ್ರತೆ ಹಿನ್ನೆಲೆಯಲ್ಲಿ ರೋಗ ನಿಯಂತ್ರಣಕ್ಕಾಗಿ ಹಂಪಿಯ ಪುಣ್ಯ ಕ್ಷೇತ್ರಗಳಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ವಿಜಯನಗರ ಜಿಲ್ಲಾಡಳಿತವು ಈ ಆದೇಶ ನೀಡಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು, ಸಂಕ್ರಮಣ ಹಬ್ಬದ ಪ್ರಯುಕ್ತ ಹಂಪಿ ಪುಣ್ಯ ಕ್ಷೇತ್ರದಲ್ಲಿ ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆಯಿಂದ ಪ್ರತಿ ವರ್ಷವೂ 10 ರಿಂದ 15 ಸಾವಿರ ಭಕ್ತಾಧಿಗಳು ಹಬ್ಬ ಆಚರಿಸೋದಕ್ಕೆ ಒಂದು ದಿನ ಮುಂಚಿತವಾಗಿ ಆಗಮಿಸಿ, ವಾಸ್ತವ್ಯ ಹೂಡುತ್ತಾರೆ.
ಕೊರೋನಾ ಹೆಚ್ಚಿರುವಂತ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಯಾವುದೇ ಹೆಚ್ಚು ಜನರು ಸೇರೋದಕ್ಕೆ ನಿಷೇಧ ಹೇರಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ನಿಯಂತ್ರಣ ಕ್ರಮವಾಗಿ ದಿನಾಂಕ 13-01-2022ರಿಂದ ದಿನಾಂಕ 17-01-2022ರವರೆಗೆ ಹಂಪಿ ಪುಣ್ಯ ಕ್ಷೇತ್ರದಲ್ಲಿ ಹೆಚ್ಚಿನ ಜನ ಸಂದಣಿ ಸೇರದಂತೆ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
PublicNext
13/01/2022 04:25 pm