ಬೆಂಗಳೂರು : ವೀಕೆಂಡ್ ಕರ್ಫ್ಯೂ, ನೈಟ್ ಕರ್ಪ್ಯೂ, ಸೇರಿದಂತೆ ಕೋವಿಡ್ ನಿಯಮ ಸಡಿಲಿಕೆ ಕುರಿತಂತೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮುಖ್ಯಮಂತ್ರಿ ಗಳ ಗೃಹ ಕಚೇರಿ ಕೃಷ್ಣದಲ್ಲಿ ಮಧ್ಯಾಹ್ನ 1 ಗಂಟೆಗೆ ಹೈವೊಲ್ಟೇಜ್ ಮೀಟಿಂಗ್ ನಡೆಯಲಿದೆ.
ಈ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ, ಸಚಿವರಾದ ಆರ್ ಅಶೋಕ್, ಡಾ.ಕೆ.ಸುಧಾಕರ್, ಡಾ.ಅಶ್ವಥ್ ನಾರಾಯಣ್ , ಆರೋಗ್ಯ ಇಲಾಖೆಯ ಅಧಿಕಾರಿ ಗಳು, ಬಿಬಿಎಂಪಿ ಮುಖ್ಯ ಆಯು ಕ್ತರು ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ಹಲವು ಸಂಘಟನೆ ವೀಕೆಂಡ್ ಕರ್ಫ್ಯೂ ಸಡಿಲಿಕೆ ಮಾಡಬೇಕು ಎಂದು ಒತ್ತಾಯ ಮಾಡಿದೆ. ಅದರೆ ತಜ್ಞರು ಮಾತ್ರ ಇನ್ನೊಂದು ವಾರ ಕಾದು ನೋಡುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಲ್ಲರ ಅಭಿಪ್ರಾಯ ಪಡೆಯಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅಂತಿಮ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ.
PublicNext
21/01/2022 11:05 am