ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿಯಲ್ಲಿ ಮತ್ತೆ ವಾಯುಮಾಲಿನ್ಯ: ನಿರ್ಮಾಣ ಚಟುವಟಿಕೆ ನಿಷೇಧ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೆ ವಾಯುಮಾಲಿನ್ಯ ಸಮಸ್ಯೆ ತಲೆದೋರಿದೆ. ಹೀಗಾಗಿ ಗಾಳಿಯ ಗುಣಮಟ್ಟವನ್ನು ಗಮನಿಸಿದ ಸುಪ್ರೀಂ ಕೋರ್ಟ್ ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಮತ್ತೆ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ವಿಧಿಸಿದೆ ಮತ್ತು ಈ ಅವಧಿಗೆ ಕಾರ್ಮಿಕ ಸೆಸ್‌ನಂತೆ ಸಂಗ್ರಹಿಸಲಾದ ನಿಧಿಯಿಂದ ಸಂತ್ರಸ್ತ ಕಾರ್ಮಿಕರಿಗೆ ಜೀವನಾಧಾರ ಒದಗಿಸುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ವಿಶೇಷ ಪೀಠ, ಬುಧವಾರ ರಾತ್ರಿ ಅಪ್‌ಲೋಡ್ ಮಾಡಿದ ಮಧ್ಯಂತರ ಆದೇಶದಲ್ಲಿ, ಮಧ್ಯಂತರ ಕ್ರಮವಾಗಿ ಮತ್ತು ಮುಂದಿನ ಆದೇಶದವರೆಗೆ, ನಾವು ಈ ಕೆಳಗಿನ ಎರಡು ಷರತ್ತುಗಳಿಗೆ ಒಳಪಟ್ಟು ಎನ್‌ಸಿಆರ್‌ನಲ್ಲಿನ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧವನ್ನು ಪುನಃ ವಿಧಿಸುತ್ತೇವೆ ಎಂದು ತಿಳಿಸಲಾಗಿದೆ.

Edited By : Nagaraj Tulugeri
PublicNext

PublicNext

25/11/2021 04:06 pm

Cinque Terre

64.5 K

Cinque Terre

0

ಸಂಬಂಧಿತ ಸುದ್ದಿ