ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಾದಗಿರಿ: ಕೋವಿಡ್ 4ನೇ ಅಲೆ ಕುರಿತು ಜಾಗೃತಿ ಮೂಡಿಸಿದ ಎಸ್ಪಿ ವೇದಮೂರ್ತಿ.!

ಯಾದಗಿರಿ : ಇತ್ತೀಚಿಗೆ ಕೋವಿಡ್ ಪಾಸಿಟಿವಿಟಿ ಹೆಚ್ಚಾಗುತ್ತಿದ್ದ ರಿಂದ ಪೊಲೀಸ್ ಇಲಾಖೆ ಮತ್ತು ನಗರಸಭೆಯ ವತಿಯಿಂದ ಕೋವಿಡ್ 4ನೇ ಅಲೆ ಬರುತ್ತಿದ್ದರಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮತ್ತು ಮಾಸ್ಕ್ ಧರಿಸದೆ ಇದ್ದವರಿಗೆ ದಂಡ ವಿಧಿಸುವ ಕಾರ್ಯಕ್ರಮವನ್ನು ಯಾದಗಿರಿ ಎಸ್ಪಿ ಡಾ. ಸಿ.ಬಿ ವೇದಮೂರ್ತಿ ಅವರ ನೇತೃತ್ವದಲ್ಲಿ ನಗರದಲ್ಲಿ ಹಮ್ಮಿಕೊಳ್ಳಲಾಯಿತು.

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, 60 ವರ್ಷ ಮೇಲ್ಪಟ್ಟವರು ಬೂಸ್ಟರ ಡೋಸ್ , 12 ರಿಂದ 18 ವಯಸ್ಸಿನ ಮಕ್ಕಳು ಕಡ್ಡಾಯವಾಗಿ ಲಸಿಕೆ ಹಾಕಿಕೊಳ್ಳಬೇಕು ಸರ್ಕಾರ ಹೊರಡಿಸಿರುವ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಬೇಕು ಎಂದು ಸಾರ್ವಜನಿಕರಿಗೆ ತಿಳಿಸಿದರು.

ಇನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿಯ ಬಗ್ಗೆ ಜಾಗೃತಿ ಅಭಿಯಾನ ಮಾಡಲಾಗುತ್ತಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದರು.

ವರದಿ: ಮೌನೇಶ ಬಿ. ಮಂಗಿಹಾಳ, ಪಬ್ಲಿಕ್ ನೆಕ್ಸ್ಟ್ ಯಾದಗಿರಿ

Edited By : Nagesh Gaonkar
PublicNext

PublicNext

27/04/2022 09:35 pm

Cinque Terre

62.73 K

Cinque Terre

0

ಸಂಬಂಧಿತ ಸುದ್ದಿ