ನವದೆಹಲಿ: ದೇಶದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಿಗದೇ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲ್ಲೇ ಇದೆ. ಇದೀಗ ಕೇರಳ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರು ಎರಡನೇ ಬಾರಿ ಲಾಕ್ಡೌನ್ ಹೇರುವ ಬಗ್ಗೆ ಮಾತನಾಡಿದ್ದಾರೆ.
ದೇಶದಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಲೇ ಇವೆ. ಜನರು ತುಂಬಾ ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ. ಕೊರೊನಾ ಗಂಭೀರತೆಯನ್ನು ಮರೆತಿದ್ದಾರೆ. ಇದು ಹೀಗೇ ಮುಂದುವರಿದರೆ ಎರಡನೇ ಬಾರಿಗೆ ಲಾಕ್ಡೌನ್ ಹೇರುವ ಜೊತೆಗೆ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕೇರಳದಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಸೂಕ್ತ, ಸುಧಾರಿತ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅವು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದವು ಕೂಡ. ಆದರೆ ಕೆಲವು ಬೇಜವಾಬ್ದಾರಿಯುತ ಜನರಿಂದಾಗಿ ಕೊರೊನಾ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಜನರು ಹೀಗೆ ಅಸಹಕಾರ ನೀಡುತ್ತಿದ್ದರೆ, ಬೇಜವಾಬ್ದಾರಿಯುತವಾಗಿ ವರ್ತಿಸುವುದನ್ನು ಮುಂದುವರಿಸಿದರೆ ಸರ್ಕಾರಕ್ಕೂ ಬೇರೆ ಆಯ್ಕೆ ಇಲ್ಲ. ಲಾಕ್ಡೌನ್ನಂತಹ ಕಠಿಣ ಕ್ರಮಗಳನ್ನು ಹೇರುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.
PublicNext
27/09/2020 10:57 pm