ಬೆಂಗಳೂರು: ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡ ಪರಿಣಾಮ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಅವರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ಬೆಳಗ್ಗೆ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆ ದಾಖಲಾಗಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಉಮೇಶ್ ಜಾಧವ್ ಹಾಗೂ ಅವರ ಪುತ್ರ, ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಅವರಿಗೆ ಕಳೆದ ಆಗಸ್ಟ್ ತಿಂಗಳಲ್ಲಿ ಕೊರೊನಾ ದೃಢಪಟ್ಟಿತ್ತು. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಾಗದೆ ಬೆಂಗಳೂರಿನ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
PublicNext
28/09/2020 05:53 pm