ಬೆಂಗಳೂರು: ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಮುತಾಲಿಕ್ ರ ವರದಿ ಪಾಸಿಟಿವ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಸ್ವತಃ ಮುತಾಲಿಕ್ ಅವರು ಆಸ್ಪತ್ರೆಯಿಂದಲೇ ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
'ನಮಸ್ಕಾರ, ಒಂದು ವಾರದಿಂದ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಹಾಗಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡೆ. ವರದಿ ಪಾಸಿಟಿವ್ ಬಂದಿದೆ. ಆಸ್ಪತ್ರೆಗೆ ದಾಖಲಾಗಿದ್ದೇನೆ.
ಒಂದು ವಾರ ಇಲ್ಲೇ ಇರುವೆ. ಆಸ್ಪತ್ರೆ ಸಿಬ್ಬಂದಿಯ ಸಹಕಾರ, ಹಿರಿಯರ ಆಶೀರ್ವಾದದಿಂದ ಗುಣಮುಖನಾಗಿ ಬರ್ತೀನಿ' ಎಂದು ಮುತಾಲಿಕ್ ಹೇಳಿದ್ದಾರೆ.
PublicNext
18/09/2020 08:21 pm