ಬೆಳಗಾವಿ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ಸುಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ವಿಧಿಸಲಾಗಿದ್ದ ಭಕ್ತಾದಿಗಳ ಪ್ರವೇಶ ನಿರ್ಬಂಧವನ್ನು ಬರೋಬ್ಬರಿ ಒಂದು ತಿಂಗಳ ನಂತರ ತೆರವುಗೊಳಿಸಲಾಗಿದೆ.
ರಾಜ್ಯ ಸರ್ಕಾರದ ಕೋವಿಡ್ ಮಾರ್ಗಸೂಚಿ ಅನ್ವಯ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು. ಸದ್ಯ ಮಾರ್ಗಸೂಚಿಯಲ್ಲಿ ಸರ್ಕಾರ ಸಡಿಲಿಕೆ ತಂದಿದ್ದು, ದೇವಸ್ಥಾನವನ್ನು ಭಕ್ತಾದಿಗಳ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ. ಅಗತ್ಯ ಸುರಕ್ಷತಾ ಕ್ರಮಗಳ ನಡುವೆ ಒಂದು ತಿಂಗಳ ನಂತರ ಯಲ್ಲಮ್ಮನ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
PublicNext
31/01/2022 10:10 pm