ವಾಷಿಂಗ್ಟನ್: ವೈದ್ಯಕೀಯ ಜಗತ್ತಿನಲ್ಲೇ ಮೊಟ್ಟಮೊದಲ ಬಾರಿ ವ್ಯಕ್ತಿಯೊಬ್ಬರಿಗೆ ಕುಲಾಂತರಿ ತಳಿ ಹಂದಿಯ ಹೃದಯವನ್ನು ಕಸಿ ಮಾಡಲಾಗಿದೆ.
ಹೌದು. ಅಮೆರಿಕದ ವೈದ್ಯರು ಇಂತಹ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಮೆರಿಲ್ಯಾಂಡ್ ವಿಶ್ವವಿದ್ಯಾನಿಲಯದ ಮೆಡಿಕಲ್ ಸ್ಕೂಲ್‌ನಲ್ಲಿ ಈ ಐತಿಹಾಸಿಕ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಪ್ರಾಣಿಗಳ ಅಂಗಾಂಗವನ್ನು ಮನುಷ್ಯರಿಗೆ ಯಶಸ್ವಿಯಾಗಿ ಕಸಿ ಮಾಡುವ ಈ ಹೆಜ್ಜೆ ಮೈಲುಗಲ್ಲು ಎಂದು ಬಣ್ಣಿಸಲಾಗಿದೆ.
57 ವರ್ಷದ ಡೇವಿಡ್ ಬೆನೆಟ್ ಎಂಬ ರೋಗಿಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಮನುಷ್ಯನ ಅಂಗಾಂಗ ಕಸಿಗೆ ಆತನನ್ನು ಅನರ್ಹ ಎಂದು ನಿರ್ಧರಿಸಲಾಗಿತ್ತು. ಇದೀಗ ರೋಗಿ ಚೇತರಿಸಿಕೊಳ್ಳುತ್ತಿದ್ದು, ಹೊಸ ಅಂಗಾಂಗ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎಂಬ ಬಗ್ಗೆ ನಿಗಾ ವಹಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.
PublicNext
11/01/2022 02:25 pm