ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಜನರು ಈ ಸೋಂಕಿನ ಬಗ್ಗೆ ಉದಾಸೀನ ಮಾಡದೇ ಎಚ್ಚರದಿಂದಿರಿ ಎಂದು ಸಿಎಂ BS ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
ಕಡ್ಡಾಯವಾಗಿ ಮಾಸ್ಕ್ ಬಳಸಿ ಒಬ್ಬರಿಂದ ಒಬ್ಬರು ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ಸಿಎಂ ತಿಳಿಸಿದ್ದಾರೆ.
ಯಾವುದೇ ಸಮಸ್ಯೆ ಇಲ್ಲದವರೂ ಸಹ ಕೊರೊನಾ ಸಮಸ್ಯೆಗೆ ಒಳಗಾಗಿರೋ ಪ್ರಕರಣ ಪತ್ತೆಯಾಗ್ತಿದೆ.
ನಗರ ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರುವಂತೆ ಕೈ ಮುಗಿದು ಕೇಳಿಕೊಳ್ತೀನಿ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.
PublicNext
21/09/2020 12:23 pm