ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಯು ಕಾಲೇಜು ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರೂಪಾಂತರಗೊಂಡ ವೈರಸ್ ಭೀತಿ ನಡುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಮೊದಲೇ ಹೇಳಿದಂತೆ ಜನವರಿ 1 ರಿಂದ ದ್ವಿತೀಯ ಪಿಯುಸಿ ತರಗತಿಗಳು ಶುರುವಾಗಲಿವೆ. ಹೀಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನ ಬಿಡುಗಡೆ ಮಾಡಿದೆ.

ಮಾರ್ಗಸೂಚಿ: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಇರಲ್ಲ ದಿನಪೂರ್ತಿ ತರಗತಿ. 45 ನಿಮಿಷಗಳ, 4 ತರಗತಿಗಳನ್ನು ಮಾತ್ರ ಪ್ರತಿದಿನ ನಡೆಸಬೇಕು. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಇಲ್ಲ. ಒಂದು ಕೊಠಡಿಯಲ್ಲಿ ಕೇವಲ 15 ವಿದ್ಯಾರ್ಥಿಗಳಿಗೆ ಮಾತ್ರ ಪಾಠ. ಕೋವಿಡ್ ಹಿನ್ನೆಲೆ ಸಿಬ್ಬದಿಗೆ ಬಯೋಮೆಟ್ರಿಕ್ ಹಾಜರಾತಿ ಇಲ್ಲ. ಕಾಲೇಜುಗಳಲ್ಲಿ ಸಾಮೂಹಿಕ ಪ್ರಾರ್ಥನೆ , ಕ್ರೀಡೆ ನಿಷೇಧ. 51 ವರ್ಷ ಮೇಲ್ಪಟ್ಟ ಸಿಬ್ಬಂದಿ ಮಾಸ್ಕ್ ಜೊತೆಗೆ ಫೇಸ್ ಶೀಲ್ಡ್ ಬಳಕೆ ಕಡ್ಡಾಯ.

Edited By : Nagaraj Tulugeri
PublicNext

PublicNext

26/12/2020 08:39 pm

Cinque Terre

89.23 K

Cinque Terre

0

ಸಂಬಂಧಿತ ಸುದ್ದಿ