ಬೆಂಗಳೂರು : ರಾಜ್ಯ ರಾಜಧಾನಿ ಹಾಗೂ ಶಿವಮೊಗ್ಗ ಸೇರಿದಂತೆ 7 ಜನರಿಗೆ ಬ್ರಿಟನ್ ರೂಪಾಂತರಿ ಕೊರೊನಾ ಸೋಂಕು ತಗುಲಿತ್ತು. ಇದೀಗ ಮತ್ತೆ ಮೂವರಿಗೆ ಬ್ರಿಟನ್ ರೂಪಾಂತರಿ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ತಿಳಿದು ಬಂದಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದೇಶದ ನಾಲ್ವರಿಗೆ ಬ್ರಿಟನ್ ರೂಪಾಂತರಿ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಬ್ರಿಟನ್ ವೈರಸ್ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿರುವಂತೆ ನಾಲ್ವರು ಬ್ರಿಟನ್ ವೈರಸ್ ಸೋಂಕಿತರಲ್ಲಿ ದೆಹಲಿಯ ಒಬ್ಬರು, ಬೆಂಗಳೂರಿನ ಮೂವರು ಸೇರಿದ್ದಾರೆ.
PublicNext
01/01/2021 06:07 pm