ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹರಡುವಿಕೆಯಲ್ಲಿ ಇಂದು ಇಳಿಕೆ ಕಂಡಿದೆ. ರಾಜಧಾನಿಯಲ್ಲಿ 298 ಸೇರಿ ಒಟ್ಟು 600 ಸೋಂಕಿತ ಪ್ರಕರಣಗಳು ವರದಿಯಾಗಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳಲ್ಲಿ 1283 ಮಂದಿ ಕೋವಿಡ್-19 ನಿಂದ ಚೇತರಿಕೆ ಕಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಈ ವರೆಗೂ 10207 ಸಕ್ರಿಯ ಕೋವಿಡ್-19 ಪ್ರಕರಣಗಳಿದ್ದರೆ, ಒಟ್ಟು 12110 ಮಂದಿ ಕೋವಿಡ್-19 ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ. ರಾಜ್ಯಾದ್ಯಂತ ಈ ವರೆಗೂ ಒಟ್ಟಾರೆ 922538 ಪ್ರಕರಣಗಳು ವರದಿಯಾಗಿದ್ದರೆ, ಒಟ್ಟಾರೆ 900202 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
PublicNext
04/01/2021 11:02 pm