ನವದೆಹಲಿ: ಡೆಡ್ಲಿ ಸೋಂಕು ಕೊರೊನಾಗಿಂತಲೂ ಕ್ರೂರಿಯಾಗಿರುವ ರೂಪಾಂತರಿ ವೈರಸ್ ದಿನದಿಂದನಕ್ಕೆ ತನ್ನ ಪಾರುಪತ್ಯೆವನ್ನು ಹೆಚ್ಚಿಸುತ್ತಿದೆ.
ಸದ್ಯ ದೇಶದಲ್ಲಿ 82 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಜನವರಿ 6ರ ತನಕ 76 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಪತ್ತೆಯಾಗಿತ್ತು.
ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ.
ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸೋಂಕು ಪ್ರಸರಣನ್ನು ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಮತ್ತು ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಗಿದೆ.
PublicNext
08/01/2021 02:52 pm