ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಜಯಂತ್‍ಕುಮಾರ್.ಬಿ.ಬಿ ಅವರು ಕೋವಿಡ್-19 ಸೋಂಕು ತಗುಲಿ ಮೃತಪಟ್ಟಿದ್ದಾರೆ.
ಜಯಂತ್‍ಕುಮಾರ್.ಬಿ.ಬಿ ಅವರು 2020ರ ಡಿಸೆಂಬರ್ 4ರಂದು ಕಾಲೇಜಿನಿಂದ ಗ್ರಾಮ ಪಂಚಾಯಿತಿ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಈ ವೇಳೆಯೇ ಕೊರೊನಾ ಸೋಂಕು ತಗುಲಿತ್ತು ಎನ್ನಲಾಗಿದೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
PublicNext
13/01/2021 09:20 pm