ಪಾರೊ: ಕೊರೊನಾ ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನ ಆರಂಭವಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಭೂತನ್ ಪ್ರಧಾನಮಂತ್ರಿ ಲೊಟೆ ಶೆರಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ.
ಈ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಭೂತಾನ್ ಪ್ರಧಾನಿ, 'ರಾಷ್ಟ್ರವ್ಯಾಪಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿರುವ ಪ್ರಧಾನಿ ಮೋದಿ ಮತ್ತು ಭಾರತದ ಜನರಿಗೆ ನನ್ನ ಅಭಿನಂದನೆಗಳು' ಎಂದಿದ್ಧಾರೆ.
ಇದೇ ವೇಳೆ ಮೋದಿ ನಾಯಕತ್ವವನ್ನು ಹೊಗಳಿರುವ ಲೊಟೆ ಶೆರಿಂಗ್, 'ಲಸಿಕೆಯನ್ನು ಸಂರಕ್ಷಿಸಿ ಮತ್ತು ವಿತರಿಸುವ ನಿಟ್ಟಿನಲ್ಲಿ ನೀವು ಅಗಾಧವಾದ ನಾಯಕತ್ವ ಗುಣವನ್ನು ಪ್ರದರ್ಶಿಸಿದ್ದೀರಿ. ಈ ಸಾಂಕ್ರಾಮಿಕವು ನೀಡಿದ ನೋವಿಗೆ ಉತ್ತರವಾಗಿ ಈ ಲಸಿಕೆ ಬಂದಿದೆ' ಎಂದು ತಿಳಿಸಿದ್ದಾರೆ.
ಕೋವಿಡ್-19 ಪಿಡುಗಿನ ವಿರುದ್ಧ ಜಗತ್ತಿನ ಅತಿ ದೊಡ್ಡ, ದೇಶವ್ಯಾಪಿ ಮೊದಲ ಹಂತದ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಚಾಲನೆ ನೀಡಿದ್ದಾರೆ.
ದೇಶದ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿ ದೇಶದಾದ್ಯಂತ 3,000 ಕಡೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ.
PublicNext
16/01/2021 02:38 pm