ಹೈದರಾಬಾದ್: ದೇಶದಲ್ಲಿ ಕೊರೊನಾ ಸೋಂಕಿಗೆ ಮದ್ದು ನೀಡುವ ಅಭಿಯಾನ ಆರಂಭಿಸಿದ್ದಾರೆ ಇದು ಕೊರೊನಾ ಸೋಂಕಿತರಿಗೆ ಮಾತ್ರವಲ್ಲದೆ ಎಲ್ಲ ಮನುಕುಲಕ್ಕೂ ನೆಮ್ಮದಿ ತಂದ ಸಂಗತಿ.
ಆದ್ರೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸೋಂಕಿಗೆ ಹೆದರಿ ಆಸ್ಪತ್ರೆಯ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು 77 ವರ್ಷದ ಕೆ ನಾರಾಯಣ್ ಎಂದು ಗುರುತಿಸಲಾಗಿದೆ. ಕೊರೊನಾ ಚಿಕಿತ್ಸೆಗೆಂದು ಹೈದರಾಬಾದ್ ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಮಹಡಿಯ ಮೇಲಿನಿಂದ ಹಾರಿ ಪ್ರಾಣ ಬಿಟ್ಟಿದ್ದಾರೆ.ಕುಟುಂಬ ಮಾಹಿತಿ ಪ್ರಕಾರ ಅವರು ಮಾನಸಿಕ ಅಸ್ವಸ್ಥರಾಗಿದ್ದರು ಎಂದು ವರದಿಯಾಗಿದೆ.
ಆಸ್ಪತ್ರೆಯ ವೈದ್ಯರು ಕೊಟ್ಟಿರುವ ವರದಿ ಪ್ರಕಾರ ನಾರಾಯಣ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಜನವರಿ 13ರಂದು ಕೊಂಡಾಪುರ್ ನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ನರ್ಸ್ ಗಳಿಂದ ಚಿಕಿತ್ಸೆ ಪೆಡೆಯುತ್ತಿದ್ದ ವೇಳೆ ಆಸ್ಪತ್ರೆಯ 2ನೇ ಮಹಡಿಯ ಮೇಲಿಂದ ಹಾರಿದ್ದಾರೆ. ಇದನ್ನು ಗಮನಿಸಿ ಆಸ್ಪತ್ರೆ ಸಿಬ್ಬಂದಿ ತಕ್ಷಣ ಆಸ್ಪತ್ರೆಯ ತುರ್ತುಚಿಕಿತ್ಸಾ ಘಟಕಕ್ಕೆ ದಾಖಲಿಸಿದರೂ ಪ್ರಾಣ ಉಳಿಯಲಿಲ್ಲ ಎಂದಿದ್ದಾರೆ.
PublicNext
18/01/2021 08:20 pm