ಬೆಂಗಳೂರು : ಡೆಡ್ಲಿ ಸೋಂಕಿಗೆ ಲಸಿಕೆ ನೀಡುವ ಅಭಿಯಾನ ಆರಂಭವಾಗಿದೆ ಈಗಾಗಲೇ ಮೊದಲ ಹಂತದ ಅಭಿಮಾನ ಯಶಸ್ವಿಯಾಗಿದ್ದು ಸದ್ಯ ನಗರದಲ್ಲಿ ಎರಡನೇ ಹಂತದಲ್ಲಿ ಕೊರೊನಾ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಈಗಾಗಲೇ ಮೊದಲ ಹಂತದಲ್ಲಿ ಲಸಿಕೆಯನ್ನು ಕೊರೊನಾ ವಾರಿಯರ್ಸ್ಗಳಿಗೆ ನೀಡಲಾಗಿದೆ. ಎರಡನೇ ಹಂತದಲ್ಲಿ ಶಿಕ್ಷಕರು, ಪೊಲೀಸ್, ಕಂದಾಯ ಇಲಾಖೆ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಗುತ್ತದೆ.
ಕಳೆದ ಆರು ದಿನಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳ ಸಿಬ್ಬಂದಿಗೆ ಕೊರೊನಾ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ.
ಈವರೆಗೆ 1.82 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯಲು ನೋಂದಣಿ ಮಾಡಿಕೊಂಡಿದ್ದರು.
ಇನ್ನುಳಿದಂತೆ ಮೊದಲ ಹಂತದ ಕೊರೊನಾ ಲಸಿಕೆ ಹಾಕುವ ಕಾರ್ಯ ಮುಂದುವರೆಯುತ್ತಿದೆ. ಈ ನಡುವೆ ಬಿಬಿಎಂಪಿ ಕೇಂದ್ರ ಸರ್ಕಾರದ ಸೂಚನೆಯಂತೆ ಎರಡನೇ ಹಂತದಲ್ಲಿ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡ ಪೊಲೀಸ್, ಅಬಕಾರಿ, ಸಾರಿಗೆ ಇಲಾಖೆ, ಶಿಕ್ಷಕರು,ಅಂಗನವಾಡಿ ಕಾರ್ಯಕರ್ತರು,ಬಿಬಿಎಂಪಿ ಅಧಿಕಾರಿಗಳೂ ಸೇರಿ ಇನ್ನಿತರೆ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುತ್ತದೆ.
PublicNext
22/01/2021 10:11 am