ಬೆಂಗಳೂರು: ಎಐಎಡಿಎಂಕೆ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ನಾಯಕಿ ಶಶಿಕಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಆಪ್ತೆ ಶಶಿಕಲಾ, ಅನಾರೋಗ್ಯಕ್ಕೆ ತುತ್ತಾಗಿದ್ದರು. ಬೆಂಗಳೂರು ಮೆಡಿಕಲ್ ಕಾಲೇಜ್‌ನಲ್ಲಿ ಶಶಿಕಲಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಶಶಿಕಲಾ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರೋದು ದೃಢಪಟ್ಟಿತ್ತು. ಇದೀಗ ಶಶಿಕಲಾ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರಿಗೆ ಪ್ರಜ್ಞೆ ಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
PublicNext
24/01/2021 06:46 pm