ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದ ಶಿಕ್ಷಕಿ ಸಾವು

ಹೈದರಾಬಾದ್: ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದ ತೆಲಂಗಾಣದ ವಾರಂಗಲ್ ಜಿಲ್ಲೆಯ ಅಂಗನವಾಡಿ ಶಿಕ್ಷಕಿ ಎದೆನೋವಿನಿಂದ ಮೃತಪಟ್ಟಿದ್ದಾರೆ.

ವಾರಂಗಲ್‌ನ ಶ್ಯಾಮ್ ಪೇಟೆಯ 45 ವರ್ಷದ ಶಿಕ್ಷಕಿ ಜನವರಿ 19ರಂದು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಶನಿವಾರ ಕೆಲವು ಔಷಧಿಗಳನ್ನು ಪಡೆದಿದ್ದಾರೆ. ಬಳಿಕ ಎದೆನೋವು ಕಾಣಿಸಿಕೊಂಡಿದ್ದರಿಂದ ಮಲಗಿದ್ದು, ಭಾನುವಾರ ಬೆಳಗ್ಗೆ ಅವರು ಮೃತಪಟ್ಟಿದ್ದಾರೆ. ಶಿಕ್ಷಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಹಾತ್ಮಾ ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಕಾರಣ ಪತ್ತೆಗೆ ಪ್ರಯೋಗಾಲಯ ಮಾದರಿ ಸಂಗ್ರಹಿಸಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥ ನಾಗಾರ್ಜುನ ರೆಡ್ಡಿ ಹೇಳಿದ್ದಾರೆ.

ಇದಕ್ಕೂ ಮುನ್ನ ತೆಲಂಗಾಣದಲ್ಲಿ ಇಂತಹದ್ದೇ ಪ್ರಕರಣ ನಡೆದಿತ್ತು. ನಿರ್ಮಲ್ ಜಿಲ್ಲೆಯ 42 ವರ್ಷದ ಆರೋಗ್ಯ ಕಾರ್ಯಕರ್ತರೊಬ್ಬರು ಲಸಿಕೆ ಪಡೆದ ಬಳಿಕ ಎದೆನೋವು ಕಾಣಿಸಿಕೊಂಡು ಮೃತಪಟ್ಟಿದ್ದರು. ಆದರೆ ಪ್ರಾಥಮಿಕ ಪರೀಕ್ಷೆಯಲ್ಲಿ ಸಾವಿಗೂ ಲಸಿಕೆಗೂ ಸಂಬಂಧವಿಲ್ಲ ಎಂದು ತಿಳಿದುಬಂದಿತ್ತು.

Edited By : Vijay Kumar
PublicNext

PublicNext

25/01/2021 09:14 am

Cinque Terre

66.25 K

Cinque Terre

5