ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೋಲಿಯೋ ಬದಲು ಸ್ಯಾನಿಟೈಸರ್: 12 ಮಕ್ಕಳು ಅಸ್ವಸ್ಥ

ಯವತ್ಮಾಲ್ (ಮಹಾರಾಷ್ಟ್ರ): ಪೋಲಿಯೋ ಲಸಿಕೆ ಹಾಕುವ ಬದಲಾಗಿ ಸ್ಯಾನಿಟೈಸರ್ ಹಾಕಿದ ಪರಿಣಾಮ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ಮಹಾರಾಷ್ಟ್ರದ ಕಪಸಿ ಕೋಪರಿಯದ ಘತಾಂಜಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಆರಂಭದಲ್ಲಿ ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದು, ನಂತರ ಅವರನ್ನು ಯವತ್ಮಾಲ್ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ವಿಷಯ ತಿಳಿದು ಅಲ್ಲಿನ ಜಿಲ್ಲಾಧಿಕಾರಿ ಎಂ.ದೇವೇಂದರ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಸ್ಥಿತಿಗತಿ ವಿಚಾರಿಸಿದ್ದು, ಘಟನೆ ಕುರಿತು ಸೂಕ್ತ ತನಿಖೆ ನಡೆಸುವಂತೆ ಜಿಲ್ಲಾ ಪರಿಷತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್‌ಗೆ ಅವರಿಗೆ ನಿರ್ದೇಶನ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

01/02/2021 06:33 pm

Cinque Terre

82.72 K

Cinque Terre

16