ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಸೋಮವಾರ 388 ಪಾಸಿಟಿವ್ ಪ್ರಕರಣಗಳು ಕಂಡು ಬಂದಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,39,775ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,220ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 201 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,99,087ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
PublicNext
01/02/2021 09:34 pm