ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದೆ. ಮಂಗಳವಾರ 395 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,40,170ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,223ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 199 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 3,99,286ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
PublicNext
02/02/2021 11:05 pm