ನವದೆಹಲಿ: ಕೊರೊನಾ ವ್ಯಾಕ್ಸಿನ್ ಪಡೆದವರಲ್ಲಿ 19 ಜನ ಮೃತಪಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸ್ಪಷ್ಟನೆ ನೀಡಿದ್ದಾರೆ.
ವ್ಯಾಕ್ಸಿನ್ ಪಡೆದ ನಂತರ ಮರಣಿಸಿದ 19 ಜನ ವ್ಯಾಕ್ಸಿನ್ ಕಾರಣದಿಂದಲೇ ಮೃತಪಟ್ಟಿದ್ದಾರೆ ಎಂಬುದಕ್ಕೆ ಯಾವುದೇ ಸಮಂಜಸ ಆಧಾರಗಳು ದೊರೆತಿಲ್ಲ. ಈಗಾಗಲೇ ಲಕ್ಷಾಂತರ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಅವರಲ್ಲಿ ಎಲ್ಲರೂ ಆರೋಗ್ಯವಾಗಿದ್ದಾರೆ. ಹೀಗಾಗಿ 19 ಜನ ಸಾವನ್ನಪ್ಪಿದ್ದು ವ್ಯಾಕ್ಸಿನ್ ಹಾಕಿಸಿಕೊಂಡ ಕಾರಣಕ್ಕಾಗಿ ಅಲ್ಲ ಎಂದು ರಾಜೇಶ್ ಭೂಷಣ್ ಸ್ಪಷ್ಟನೆ ನೀಡಿದ್ದಾರೆ.
PublicNext
05/02/2021 05:00 pm