ದಾವಣಗೆರೆ: ಜಿಲ್ಲಾ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಪೂರ್ವವಲಯ ಐಜಿಪಿ ರವಿ ಅವರು ಕೊರೊನಾ ಲಸಿಕೆ ಹಾಕಿಸಿಕೊಂಡರು. ಈಗಾಗಲೇ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಕೋವಿಡ್ ಲಸಿಕೆ ಪಡೆದಿದ್ದಾರೆ. ಇಂದು ಪೊಲೀಸ್ ಸಿಬ್ಬಂದಿಯೊಂದಿಗೆ ಆಗಮಿಸಿದ ಐಜಿಪಿ ರವಿ ಅವರು, ಲಸಿಕೆಯನ್ನು ನಾನು ಹಾಕಿಸಿಕೊಂಡಿದ್ದೇನೆ. ಜನರು ಯಾವುದೇ ಭೀತಿಗೊಳಗಾಗದೇ ಬಂದು ಕೊರೊನಾ ಲಸಿಕೆ ಪಡೆಯುವ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು.
ಈಗಾಗಲೇ ಎರಡನೇ ಹಂತದ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಪೂರ್ಣಗೊಂಡಿದ್ದು, ಮೂರನೇ ಹಂತಕ್ಕೆ ಚಾಲನೆ ನೀಡಲಾಗಿದೆ. ಈ ಹಂತದಲ್ಲಿ ಪೊಲೀಸ್ ಇಲಾಖೆ, ಪಂಚಾಯತ್ ರಾಜ್ ಅಡಿಯಲ್ಲಿ ಬರುವ ಸ್ಥಳೀಯ ಆಡಳಿತ ಸಂಸ್ಥೆಗಳು, ನಗರ ಸ್ಥಳೀಯ ಆಡಳಿತ ಸಂಸ್ಥೆಗಳು, ಅಗ್ನಿಶಾಮಕ ದಳ ಸಿಬ್ಬಂದಿ, ಹೋಂ ಗಾರ್ಡ್ಸ್ ಗಳಿಗೆ ಲಸಿಕೆ ನೀಡಲಾಗುತ್ತಿದೆ.
PublicNext
10/02/2021 12:42 pm