ಬೆಂಗಳೂರು: ರಾಜ್ಯದ 21 ಜಿಲ್ಲೆಗಳಲ್ಲಿ ಹೊಸ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದಂಕಿಗೆ ಇಳಿಕೆಯಾಗಿದೆ. ಬೆಂಗಳೂರು ನಗರವನ್ನು ಹೊರತುಪಡಿಸಿ ಉಳಿದ 8 ಜಿಲ್ಲೆಗಳಲ್ಲಿ ಎರಡಂಕಿಯ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 415 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 9,43,627ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್‌ನಿಂದ ಮೂವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,244ಕ್ಕೆ ಏರಿಕೆ ಆಗಿದೆ.
ಒಟ್ಟು 9,43,627 ಸೋಂಕಿತ ಪ್ರಕರಣಗಳ ಪೈಕಿ 9,25,489 ಸೋಂಕಿತರು ಗುಣಮುಖರಾಗಿದ್ದಾರೆ. ಇಂದು ಒಂದು ದಿನದಲ್ಲೇ 322 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 5,875 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.
PublicNext
10/02/2021 08:50 pm