ಚಿಕ್ಕಬಳ್ಳಾಪುರ: ಕೊರೊನಾ ಮರೆಯುತ್ತಿರುವ ಜನಕ್ಕೆ ಮತ್ತೊಂದು ಸಂಕಷ್ಟ ಶುರುವಾಗುವ ಸಾಧ್ಯತೆಗಳಿಗೆ ಜೋಕೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ವೈರಸ್ ನಿರ್ನಾಮವಾಗಿದೆ ಎಂದು ಜನ ಉದಾಸೀನ ಮಾಡುತ್ತಿದ್ದಾರೆ. ಆದರೆ ರಾಜ್ಯಕ್ಕೆ ಕೊರೊನಾ ಎರಡನೇ ಅಲೆ ಬರುವ ಸಾಧ್ಯತೆ ಇದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಗಡಿಭಾಗಗಳಲ್ಲಿ ಹೈ ಅಲರ್ಟ್ ಘೋಷಿಸಲು ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಅರಂಭವಾಗಿದ್ದು, ಕೇರಳ-ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಕೋವಿಡ್ 19 ನೆಗಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದರು.
ಈ ಬಗ್ಗೆ ಮಹಾರಾಷ್ಟ್ರ ಹಾಗೂ ಕೇರಳ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಪತ್ರ ಬರೆದಿದ್ದು, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಸಿಎಂ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ನಾಳೆ ಸಭೆ ನಡೆಸಿ, ಎರಡನೇ ಅಲೆ ಆರಂಭವಾಗದಂತೆ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಜನ ಕೊರೊನಾ ಮಾಯವಾಗಿದೆ ಎಂದು ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಉದಾಸೀನ ಮಾಡುತ್ತಿದ್ದಾರೆ ಎಂದು ಸಚಿವರು ಅಸಮಾಧಾನ ಹೊರಹಾಕಿದರು.
PublicNext
19/02/2021 10:29 pm