ಮುಂಬಯಿ: ಕೊರೊನಾ ಕಣ್ಮರೆಯಾಗುತ್ತದೆ ಎನ್ನುವವರಿಗೆ ಡೆಡ್ಲಿ ಸೋಂಕು ಮತ್ತೆ ಶಾಕ್ ನೀಡುತ್ತಿದೆ. ಕಳೆದ ಮೂರು ವಾರಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಮಹಾರಾಷ್ಟ್ರ ಸರಕಾರವು ಮುಂಬಯಿ ಮತ್ತು ನಾಗಪುರಗಳಲ್ಲಿ ಕಠಿಣ ನಿರ್ಬಂಧಗಳನ್ನು ಹೇರಿದೆ.
ಎಪ್ಪತೈದು ದಿನಗಳ ಬಳಿಕ ಮಹಾರಾಷ್ಟ್ರದಲ್ಲಿ ಶುಕ್ರವಾರ ಕೊರೊನಾ ಪ್ರಕರಣಗಳ ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಇದರ ಬೆನ್ನಲ್ಲೇ ಮುಂಬಯಿ ಹಾಗೂ ನಾಗಪುರ ಮಹಾನಗರ ಪಾಲಿಕೆಗಳು ಸೀಲ್ ಡೌನ್ ಸೇರಿ ಹಲವು ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿವೆ.
ಐದಕ್ಕಿಂತಲೂ ಹೆಚ್ಚಿನ ಸೋಂಕಿತರು ಪತ್ತೆಯಾದಲ್ಲಿ ಅಂತಹ ಕಟ್ಟಡವನ್ನು ಸೀಲ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಹೋಟೆಲ್ ಗಳಲ್ಲಿ ಶೇ.50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ಅಂತ್ಯಕ್ರಿಯೆಗಳಲ್ಲಿ 20ಕ್ಕೂ ಹೆಚ್ಚು ಜನರು ಭಾಗವಹಿಸುವಂತಿಲ್ಲ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಗಳನ್ನು ಧರಿಸದೇ ಅಡ್ಡಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು 5,000 ಮಾರ್ಷಲ್ ಗಳನ್ನು ಪಾಲಿಕೆ ನೇಮಕ ಮಾಡಿಕೊಂಡಿದೆ. ''ಸೋಂಕಿತರು ಹೋಮ್ ಐಸೋಲೇಷನ್ ನಿಯಮ ಪಾಲಿಸುತ್ತಿಲ್ಲ. ಮದುವೆ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,'' ಎಂದು ಸರಕಾರ ಎಚ್ಚರಿಕೆ ನೀಡಿದೆ.
ಯಾವತ್ಮಲ್ ಜಿಲ್ಲಾಡಳಿತ ಗುರುವಾರ ರಾತ್ರಿಯಿಂದ 10 ದಿನಗಳ ಲಾಕ್ ಡೌನ್ ಘೋಷಿಸಿದೆ. ಜಿಲ್ಲೆಯಲ್ಲಿ 5 ರಿಂದ 9ನೇ ತರಗತಿವರೆಗೆ ಶಾಲೆಗಳನ್ನು ಹಾಗೂ ಕಾಲೇಜು ಮತ್ತು ಕೋಚಿಂಗ್ ಸೆಂಟರ್ ಗಳನ್ನು ಫೆ.28 ರವರೆಗೆ ಲಾಕ್. ಅಮರಾವತಿಯಲ್ಲಿ ವೀಕೆಂಡ್ ಲಾಕ್ ಡೌನ್,ವಾರ್ಧಾ ನಗರದಲ್ಲಿ ಶನಿವಾರ ರಾತ್ರಿ 8ರಿಂದ ಸೋಮವಾರ ಬೆಳಗ್ಗೆ 8ರವರೆಗೆ ಕಫ್ರ್ಯೂ ಹೇರಲಾಗಿದೆ.
PublicNext
20/02/2021 11:00 am