ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪರಿಸ್ಥಿತಿಯಿಲ್ಲ: ಡಾ.ಕೆ. ಸುಧಾಕರ್

ಬೆಂಗಳೂರು: ನೆರೆಯ ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು, ರಾಜ್ಯದಲ್ಲೂ ಕೊರೊನಾ 2ನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಕೊರೊನಾ ವಿಚಾರದಲ್ಲಿ ಜನರು ಮೈಮರೆತಿದ್ದೇ ಆದರೆ, ಅಪಾಯ ತಪ್ಪಿದ್ದಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ಜನ ಎಚ್ಚರ ವಹಿಸುವುದು ಅಗತ್ಯವಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ, ಕೇರಳದಿಂದ ರಾಜ್ಯಕ್ಕೆ ಬರುವವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸುವ ಸಂಬಂಧ ಸದ್ಯದಲ್ಲೇ ಗೃಹ ಹಾಗೂ ಕಂದಾಯ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಅರೆ ಲಾಕ್ ಡೌನ್ ಹೇರುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದರು.

Edited By : Nirmala Aralikatti
PublicNext

PublicNext

20/02/2021 02:06 pm

Cinque Terre

48.72 K

Cinque Terre

7

ಸಂಬಂಧಿತ ಸುದ್ದಿ