ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾಘಾತ : ಪುಣೆಯಲ್ಲಿ ಶಾಲಾ ಕಾಲೇಜ್ ಬಂದ್ ಆದೇಶ, ರಾತ್ರಿ ಕರ್ಫ್ಯೂ ಚಿಂತನೆ

ಮುಂಬೈ : ಮಹಾರಾಷ್ಟರದಲ್ಲಿ ಹಟಾತ್ತನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುಣೆಯಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಘೋಷಿಸಲು ಸರಕಾರ ಚಿಂತನೆ ನಡೆಸಿದೆ.

ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ - 19 ನಿಯಂತ್ರಿಸಲು ರಾಜ್ಯ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಸರಕಾರ ಆಲೋಚಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ ಠಾಕ್ರೆ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಲಾಗುತ್ತಿದ್ದು, ಸಭೆಯ ನಂತರ ರಾತ್ರಿ ಕರ್ಫ್ಯೂ ವಿಧಿಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದೆಂದು ಸಚಿವ ವಿಜಯ ವಡಟ್ಟಿವಾರ್ ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂಬುದು ಗಮನಾರ್ಹ.

Edited By :
PublicNext

PublicNext

21/02/2021 01:53 pm

Cinque Terre

51.94 K

Cinque Terre

6