ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ: ಸತತ 2ನೇ ದಿನವೂ 500ಕ್ಕಿಂತ ಹೆಚ್ಚು ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ಆತಂಕ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿ ಇಂದು 523 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದ್ದು, 380 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾಮಾರಿಗೆ ಇಂದು 6 ಜನ ಬಲಿಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 12,326ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ 9,50,730ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ 5,638 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಪೈಕಿ 121 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 5, ಧಾರವಾಡದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

Edited By : Vijay Kumar
PublicNext

PublicNext

27/02/2021 09:05 pm

Cinque Terre

40.62 K

Cinque Terre

6