ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಳೆದು ತೂಗಿ ಆವರಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ 1,531 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 19 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 28,99,195 ಜನರಿಗೆ ಸೋಂಕು ತಗುಲಿದ್ದು, 36,456 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,430 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,40,147 ಕ್ಕೆ ಏರಿಕೆಯಾಗಿದೆ. ಇನ್ನು 22,569 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 1.03%ನಷ್ಟಿದೆ. ಇನ್ನು ಮರಣ ಪ್ರಮಾಣ 1.24% ನಷ್ಟಿದೆ. ರಾಜ್ಯಾದ್ಯಂತ 1,48,319 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಕೊಂಚ ವೇಗ ಪಡೆದುಕೊಂಡಂತಿದೆ. ಇಂದು 376 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,25,957ಕ್ಕೆ ಏರಿಕೆಯಾಗಿದೆ. 244 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,01,937ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 15,843 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 8,176 ಸಕ್ರಿಯ ಪ್ರಕರಣಗಳಿವೆ.
PublicNext
28/07/2021 07:20 pm