ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಹೆಚ್ಚಿದ ಬ್ಲ್ಯಾಕ್ ಫಂಗಸ್ ಆತಂಕ.!- ಸೋಂಕಿತರ ಸಂಖ್ಯೆ 3,703ಕ್ಕೆ ಏರಿಕೆ- 360 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕದ ನಡುವೆ ಬ್ಲ್ಯಾಕ್ ಫಂಗಸ್ ಕೇಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ರಾಜ್ಯದ 30 ಜಿಲ್ಲೆಗಳಲ್ಲಿ ಒಟ್ಟು 3,703 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದೆ. ಬ್ಲ್ಯಾಕ್ ಫಂಗಸ್‌ಗೆ ರಾಜ್ಯಾದ್ಯಂತ 360 ಜನ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಈವರೆಗೂ 1174 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದ್ದು, 112 ಜನ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲೇ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ವಿಕ್ಟೋರಿಯಾದಲ್ಲಿ 209 ಕೇಸ್, ಬೌರಿಂಗ್ ಆಸ್ಪತ್ರೆಯಲ್ಲಿ 404 ಕೇಸ್, ಕೆಸಿ ಜನರಲ್ ಆಸ್ಪತ್ರೆಯಲ್ಲಿ 4 ಕೇಸ್ ಹಾಗೂ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ 3 ಕೇಸ್ ಪತ್ತೆಯಾಗಿವೆ.

Edited By : Vijay Kumar
PublicNext

PublicNext

02/08/2021 11:04 pm

Cinque Terre

42.99 K

Cinque Terre

0