ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

3,000 ವೈದ್ಯರು, 7,000 ನರ್ಸ್ ಗಳು, 7,000 ಗ್ರೂಪ್ ಡಿ ಸಿಬ್ಬಂದಿ ನೇಮಕ : ಡಾ. ಅಶ್ವತ್ಥನಾರಾಯಣ

ಬೆಂಗಳೂರು : ಕೊರೊನಾ ವೈರಸ್ 3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.

ಶೀಘ್ರದಲ್ಲೇ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ ವೈದ್ಯರಿದ್ದು, ಉಳಿದ 1,000 ಸಾಮಾನ್ಯ ವೈದ್ಯರಿದ್ದಾರೆ. ಅಲ್ಲದೆ, ಇನ್ನೂ 3,000 ವೈದ್ಯರನ್ನೂ, 7,000 ನರ್ಸ್ ಹಾಗೂ ಗ್ರೂಪ್ ಡಿ ವಿಭಾಗದಲ್ಲಿ 7,000 ಸಿಬ್ಬಂದಿ ಸೇರಿದಂತೆ ಒಟ್ಟು 17 ಸಾವಿರ ವೈದ್ಯಕೀಯ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗತ್ತಿದೆ" ಎಂದು ಡಾ. ಅಶ್ವಥ್ ನಾರಾಯಣ ಎಂದು ಹೇಳಿದ್ದಾರೆ.

ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಕೋವಿಡ್-19 ಸಂಕಷ್ಟದಲ್ಲಿ ಕೊರೋನಾ ನಿಗ್ರಹ ಪಡೆಯ ಕಾರ್ಯಕರ್ತರಾಗಿ ಕೆಲಸ ಮಾಡಿದ ಗಣ್ಯರು, ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿ ಸನ್ಮಾನಿಸಿದ 'ನಿಮ್ಮ ಸ್ಪಂದನೆ, ನಮ್ಮ ವಂದನೆ' ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದ್ದಾರೆ.

ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಐಸಿಯು, ಆಕ್ಸಿಜನ್ ಸೌಲಭ್ಯ, ವೆಂಟಿಲೇಟರ್, ಸಿಬ್ಬಂದಿ, ಪ್ರತ್ಯೇಕ ಮಕ್ಕಳ ವಿಭಾಗ ಇತ್ಯಾದಿಗಳನ್ನು ಸ್ಥಾಪನೆ ಮಾಡಲಾಗುತ್ತಿದೆ.

ಅಲ್ಲದೆ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 25, ಜಿಲ್ಲಾಸ್ಪತ್ರೆಗಳಲ್ಲಿ 100 ಐಸಿಯು ಬೆಡ್ಗಳ ಪ್ರತ್ಯೇಕ ವಿಭಾಗವನ್ನು ಸ್ಥಾಪನೆ ಮಾಡಲಾಗುತ್ತಿದೆ. ಯಾವುದೇ ಆಸ್ಪತ್ರೆಯಲ್ಲಿ ಐಸಿಯು ಅಥವಾ ಐಸಿಯುಯೇತರ ಯಾವುದೇ ಬೆಡ್ ಇದ್ದರೂ ಅದಕ್ಕೆ ಆಕ್ಸಿಜನ್ ಸೌಲಭ್ಯ ಒದಗಿಸಲಾಗುವುದು.

Edited By : Nirmala Aralikatti
PublicNext

PublicNext

17/08/2021 07:26 am

Cinque Terre

35.57 K

Cinque Terre

4

ಸಂಬಂಧಿತ ಸುದ್ದಿ