ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್ ನಿಂದ ಗುಣಮುಖರಾದವರಲ್ಲಿ ಕ್ಷಯ ರೋಗ ಪತ್ತೆ..! : ಪರೀಕ್ಷೆ ಅಗತ್ಯ

ಬೆಂಗಳೂರು: ಹೆಮ್ಮಾರಿ ಸೋಂಕು ಕೊರೊನಾ ಪತ್ತೆಯಾದ ಕೆಲವರಲ್ಲಿ ಕ್ಷಯ ರೋಗ ಕಾಣಿಸಿಕೊಳ್ಳುತ್ತಿದೆ ಹಾಗಾಗಿ ಕ್ಷಯ ರೋಗ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ನಿಂದ ಗುಣಮುಖರಾದ 28 ಲಕ್ಷ ಜನರಿಗೆ ತಪಾಸಣೆ ಅಗತ್ಯವಾಗಿದ್ದು, ಈ ಮೂಲಕ ಕ್ಷಯ ಮುಕ್ತ ರಾಜ್ಯ ಮಾಡುವ ಗುರಿ ಹೊಂದಲಾಗಿದೆ.

ಹಾಗಾಗಿ ಕ್ಷಯರೋಗ ಪತ್ತೆ ಆಂದೋಲನ ನಡೆಸಲಾಗುತ್ತಿದೆ. ಕೋವಿಡ್ ಶ್ವಾಸಕೋಶ ಸಂಬಂಧಿತ ರೋಗ, ಕ್ಷಯ ರೋಗ ಸಹ ಅದೇ ಅಂಗಕ್ಕೆ ಸಂಬಂಧಿತ ಖಾಯಿಲೆಯಾಗಿದೆ. ಭವಿಷ್ಯದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವ ಉದ್ದೇಶದಿಂದ ತಪಾಸಣೆ ನಡೆಸಲಾಗುತ್ತಿದೆ ಎಂದರು..

ಕೋವಿಡ್ ಬಂದವರೆಲ್ಲರಿಗೂ ಕ್ಷಯ ರೋಗ ಬರುತ್ತೆ ಎನ್ನುವುದು ಸರಿಯಲ್ಲ, ಕೆಲವರಿಗೆ ಮಾತ್ರ ಬರುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇದನ್ನು ಮಾಡಿಸಬೇಕಿದೆ. ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಕ್ಷಯ ತಪಾಸಣೆಗೆ ಮುಂದೆ ಬನ್ನಿ ಎಂದು ಕರೆ ನೀಡಿದರು.

Edited By : Nirmala Aralikatti
PublicNext

PublicNext

17/08/2021 02:35 pm

Cinque Terre

54.04 K

Cinque Terre

0